ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. 
ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
ರಾಜ್ಯದಲ್ಲೂ ಬ್ರಾಹ್ಮಣರಿಗೆ ಶೇ.10 ಮೀಸಲಾತಿ: ಬ್ರಾಹ್ಮಣ ಸಮ್ಮೇಳನದಲ್ಲಿ ಯಡಿಯೂರಪ್ಪ ಭರವಸೆ
Updated on

ಕುಂದಾಪುರ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬ್ರಾಹ್ಮಣ ಸಮಾಜಕ್ಕೆ ಕೇಂದ್ರ ಸರ್ಕಾರದ ನೀತಿಯಂತೆ ಶೇ.10 ರಷ್ಟು ಮೀಸಲಾತಿ ನೀಡಿರುವ ಉದಾಹರಣೆಗಳಿವೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ ಆದೇಶವನ್ನು ಪರಿಶೀಲಿಸಿ ಕರ್ನಾಟಕದಲ್ಲಿಯೂ ಜಾರಿಗೊಳಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. 

ಡಿ.28 ರಂದು ಕುಂದಾಪುರದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನದಲ್ಲಿ ಮಾತನಾಡಿರುವ ಯಡಿಯೂರಪ್ಪ ಬೆಂಗಳೂರಿನಲ್ಲಿ ಬ್ರಾಹ್ಮಣ ಮಹಾಸಭಾ ವತಿಯಿಂದ ನಿರ್ಮಾಣವಾಗಲಿರುವ ಸಭಾಭವನಕ್ಕೆ ಮೊದಲ ಕಂತಿನಲ್ಲಿ 5 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಮಹಾ ಸಮ್ಮೇಳನದಲ್ಲಿ ಪ್ರಾಸ್ತಾಪಿಸಿರುವ ಬೇಡಿಕೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. 

ಹಿಂದೂ ಧರ್ಮದಲ್ಲಿ ಬ್ರಾಹ್ಮಣರು ಧಾರ್ಮಿಕ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರಂತಹ ಗುರು ಶ್ರೇಷ್ಠರ ತತ್ವದ ಆದರ್ಶದಲ್ಲಿ ನಡೆದುಬಂದ ವೇದ ಉಪನಿಷತ್ತುಗಳನ್ನು ಬೋಧಿಸುತ್ತಾ ಸಮಾಜದ ಎಲ್ಲ ವರ್ಗದವರಿಗೆ ಧಾರ್ಮಿಕತೆಯ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಸನಾತನ ಹಿಂದೂ ಧರ್ಮದ ರಕ್ಷ ಣೆಯಲ್ಲಿ ಬ್ರಾಹ್ಮಣ ಸಮಾಜ ಮಹತ್ವದ ಪಾತ್ರ ವಹಿಸಿದೆ. ಹಿಂದೂ ಸಮಾಜವನ್ನು ಜಾಗೃತಗೊಳಿಸುವ ಕೀರ್ತಿ ಬ್ರಾಹ್ಮಣ ಸಮಾಜಕ್ಕೆ ಸಲ್ಲುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com