ಪೇಜಾವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ
ರಾಜ್ಯ
ಬೆಂಗಳೂರಿಗೆ ಆಗಮಿಸಿದ ಶ್ರೀಗಳ ಪಾರ್ಥೀವ ಶರೀರ: ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ
ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಾರ್ಥೀವ ಶರೀರವನ್ನು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಎಚ್ ಎಎಲ್ ವಿಮಾನ ನಿಲ್ದಾಣ ಕರೆತರಲಾಗಿದೆ.
ಬೆಂಗಳೂರು: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಾರ್ಥೀವ ಶರೀರವನ್ನು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಎಚ್ ಎಎಲ್ ವಿಮಾನ ನಿಲ್ದಾಣ ಕರೆತರಲಾಗಿದೆ.
ಹೆಲಿಕಾಪ್ಟರ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಮತ್ತು ವಾಯು ಸೇನಾ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಗಳ ಪಾರ್ಥೀವ ಶರೀರವನ್ನು ಕೇಸರಿ ಪೆಟ್ಟಿಗೆಯಲ್ಲಿ ತರಲಾಗಿದೆ.
ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತಾಧಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂಬಿ ಪಾಟೀಲ್, ಮತ್ತಿತರ ನಾಯಕರು ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.


