ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ ವಿಶ್ವಚೇತನ ಪ್ರಶಸ್ತಿ

: ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಆಗಿದ್ದ ಅನಿಲ್ ಕುಂಬ್ಳೆಗೆ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ವಿಶ್ವ ಚೇತನ ಪ್ರಶಸ್ತಿ ಲಭಿಸಿದೆ.
ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ
Updated on: 
ಬೆಳಗಾವಿ: ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಆಗಿದ್ದ ಅನಿಲ್ ಕುಂಬ್ಳೆಗೆ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ವಿಶ್ವ ಚೇತನ ಪ್ರಶಸ್ತಿ ಲಭಿಸಿದೆ.
ಸೋಮವಾರ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ವಿಶಾಳಿ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಸ್ವಾಮೀಜಿ, ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಕಾಶಿ ಜಗದ್ಗುರುಗಳು ಕುಂಬ್ಳೆ ಅವರಿಗೆ ಪ್ರಶಸ್ತಿ ನೀಡಿ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com