ಯೋಧ ಗುರು ಕುಟುಂಬಕ್ಕೆ ಗಣ್ಯರ ಸಂತಾಪ: ಪರಿಹಾರ ಶೀಘ್ರ ಒದಗಿಸಲು ಮುಖ್ಯಮಂತ್ರಿ ಸೂಚನೆ

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಮಂಡ್ಯದ ಯೋಧ ಗುರು ಅವರ...
ಸಿಎಂ ಹೆಚ್ ಡಿ ಕುಮಾರಸ್ವಾಮಿ
ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಮಂಡ್ಯದ ಯೋಧ ಗುರು ಅವರ ಕುಟುಂಬದವರೊಂದಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಮಾತನಾಡಿ ಸಂತಾಪ ಸೂಚಿಸಿದ್ದಾರೆ.

ಗುರು ಅವರ ಕುಟುಂಬದವರ ಜೊತೆ ನಾವೆಲ್ಲಾ ಇದ್ದೇವೆ. ಆದಷ್ಟು ಬೇಗ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ವೀರ ಯೋಧನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಪರಿಹಾರವನ್ನು ಕೂಡಲೇ ದೊರಕಿಸಿಕೊಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಸ್ವಗ್ರಾಮದಲ್ಲಿ ಮಡುಗಟ್ಟಿದ ಶೋಕ: ಗುರು ಮಂಡ್ಯದ ಗುಡಿಗೆರೆಯ ನಿವಾಸಿಯಾಗಿದ್ದು, ಹೊನ್ನಯ್ಯ-ಚಿಕ್ಕತಾಯಮ್ಮ ದಂಪತಿಯ ಮೂವರು ಮಕ್ಕಳಲ್ಲಿ ಮೊದಲ ಪುತ್ರ. 8 ವರ್ಷಗಳ ಹಿಂದೆ ಸೇನೆಗೆ ಸೇರಿದ್ದ ಅವರು ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಬಂದಿದ್ದರು. 15 ದಿನಗಳ ಕಾಲ ಊರಿನಲ್ಲಿದ್ದು ಇದೇ ತಿಂಗಳ 10ರಂದು ಕರ್ತವ್ಯಕ್ಕೆ  ಹಿಂದಿರುಗಿದ್ದರು.

ನಿನ್ನೆ ಸಂಜೆ ವಿಷಯ ತಿಳಿಯುತ್ತಿದ್ದಂತೆ ಇಡೀ ಗ್ರಾಮದ ಜನ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಎಲ್ಲರೊಂದಿಗೂ ಆತ್ಮೀಯತೆಯಿಂದ  ಮಾತನಾಡುತ್ತಿದ್ದ ಗುರು ಸಂಕ್ರಾಂತಿ ರಜೆಯಲ್ಲಿ ಊರಿಗೆ ಬಂದಿದ್ದಾಗ ತನ್ನ ಗೆಳೆಯರೊಂದಿಗೆ ಕಾಲ ಕಳೆದಿದ್ದರು ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಿದ್ದಾರೆ.

ನಿನ್ನೆ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಎಚ್‌.ಗುರು ಅವರು ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ಚಿಕ್ಕ ವಯಸ್ಸಿನಲ್ಲೇ ದೇಶಸೇವೆಗೆ ಜೀವನ ಮುಡಿಪಾಗಿಟ್ಟಿದ್ದ ಗುರು ಯುವಕರಿಗೆ ಮಾದರಿಯಾಗಿದ್ದರು. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ, ಯೋಧನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com