ಮುಸ್ಲಿಮರ ಬಗ್ಗೆ ಮಾತನಾಡಿದರೆ ಜೀವ ತೆಗೆಯುತ್ತೇವೆ: ಕೇಂದ್ರ ಸಚಿವ ಹೆಗಡೆಗೆ ಜೀವ ಬೆದರಿಕೆ ಕರೆ

ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. ಶುಕ್ರವಾರ ಮಧ್ಯರಾತ್ರಿ ಸಚಿವರ ಮನೆ ದೂರವಾಣಿಗೆ 0022330000 ಈ ನಂಬರ್ ನಿಂದ ಅನಾಮಿಕ ಕರೆ ಬಂದಿದೆ.
ಅನಂತ್ ಕುಮಾರ್ ಹೆಗಡೆ
ಅನಂತ್ ಕುಮಾರ್ ಹೆಗಡೆ
Updated on

ಶಿರಸಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. ಶುಕ್ರವಾರ ಮಧ್ಯರಾತ್ರಿ ಸಚಿವರ ಮನೆ ದೂರವಾಣಿಗೆ 0022330000 ಈ ನಂಬರ್ ನಿಂದ ಅನಾಮಿಕ ಕರೆ ಬಂದಿದೆ.

ಈ ಸಂಬಂಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಿಸಿದ್ದಾರೆ.

ಈ ಅನಾಮಿಕ ಕರೆ ಬಂದ ಸಂದರ್ಭದಲ್ಲಿ  ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಇರಲಿಲ್ಲ. ಅವರ  ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿದ್ದಾರೆ.
ನಿಮ್ಮ ಪಾಡಿಗೆ ನಿಮ್ಮ ಕೆಲಸ ಮಾಡಿಕೊಂಡು ಸಮ್ಮನೆ ಇರಬೇಕು, ಮುಸ್ಲಿಂರ ಬಗ್ಗೆ ಮಾತನಾಡಿದರೆ ನಿಮ್ಮನ್ನು, ನಿಮ್ಮ ಕುಟುಂಬವನ್ನು ಬಿಡುವುದಿಲ್ಲ. ಜೀವ ತೆಗೆಯುತ್ತೇವೆ, ಅಯೋಧ್ಯೆಯು ನಿಮಗೆ ಬೇಕಾ? ಅದನ್ನು ಬಿಡುವುದಿಲ್ಲ, ನಿಮ್ಮ  ಜೀವ ತೆಗೆಯುತ್ತೇವೆ ಎಂದು ಕರೆ ಮಾಡಿದವರು ಹೇಳಿದ್ದಾರೆ.
ಕರೆ ಮಾಡಿದವರು ಅವಾಚ್ಯ ಶಬ್ದಗಳಿಂದ ಬೈಯತೊಡಗಿದಾಗ ರೂಪಾ ಹೆಗಡೆ ಪೋನ್ ಕಟ್ ಮಾಡಿದ್ದಾರೆ. ನಂತರ ಹಲವು ಬಾರಿ ಇದೇ ಸಂಖ್ಯೆಯಿಂದ ಕರೆಗಳು ಬಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com