ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬೆಳಗಾವಿ ವಿಟಿಯು ವಿಭಜನೆ ಸಂಬಂಧ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ.ಬೆಳಗಾವಿ ವಿಟಿಯು ವಿಭಜನೆ ಸಂಬಂಧ ,ನಿನ್ನೆ ಸಮಾರಂಭವೊಂದರಲ್ಲಿ ತಮ್ಮ ಹೇಳಿಕೆ ಕುರಿತು ತಪ್ಪಾಗಿ ಗ್ರಹಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಆದರೆ ವಿಟಿಯು ವಿಭಜನೆ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.