ಸಾಂದರ್ಭಿಕ ಚಿತ್ರ
ರಾಜ್ಯ
ಚಿಕ್ಕಬಳ್ಳಾಪುರ: ಪಾಕಿಸ್ತಾನದ ಪರ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಹಾಕುತ್ತಿದ್ದ ಯುವಕನ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ .,..
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೋಲಿಸರು ಬಂಧಿಸಿದ್ದಾರೆ.
ಗೌರಿಬಿದನೂರು ತಾಲ್ಲೂಕಿನ ಅಲ್ಲಿಪುರ ಗ್ರಾಮದ ಹೈದರ್ ಬಂಧಿತ ಯುವಕ. ಆರೋಪಿ ಹೈದರ್‌ನ ಸಾಮಾಜಿಕ ಜಾಲತಾಣದಲ್ಲಿನ ಚಟುವಟಿಕೆಗಳನ್ನು ಗಮನಿಸಿದ ಅಲ್ಲಿಪುರ ಗ್ರಾಮಸ್ಥರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಆತನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಎಸ್.ಪಿ ಕಾರ್ತಿಕ್‌ರೆಡ್ಡಿ ಹಾಗೂ ಸಿಬ್ಬಂದಿ ಆರೋಪಿ ಹೈದರ್ ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ