ಮಂಗಳೂರು - ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು: ಗೋಯಲ್

ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುವುದು....
ವಂದೇ ಭಾರತ್ ಎಕ್ಸ್ ಪ್ರೆಸ್
ವಂದೇ ಭಾರತ್ ಎಕ್ಸ್ ಪ್ರೆಸ್
ಬೆಂಗಳೂರು: ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರು ಶುಕ್ರವಾರ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋಯಲ್ ಅವರು, ಮೇಕ್ ಇನ್ ಇಂಡಿಯಾ ಯೋಜನೆಯಡಿ ತಯಾರಿಸಲಾದ ದೇಶದ ಮೊದಲ ಸೆಮಿ ಹೈಸ್ಪೀಡ್ ರೈಲನ್ನು ಕರ್ನಾಟಕಕ್ಕೆ ಪರಿಚಯಿಸುವುದಾಗಿ ತಿಳಿಸಿದರು. 
ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸಲು ವಂದೇ ಭಾರತ್ ರೈಲನ್ನು ಪರಿಚಯಿಸಲಾಗುತ್ತದೆ. ಮಂಗಳೂರು-ಚೆನ್ನೈ ಮತ್ತು ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಲಿದೆ ಎಂದರು.
ಇನ್ನು ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಆಳವಡಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಆರು ತಿಂಗಳಿನಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಆಳವಡಿಸಲಾಗುತ್ತದೆ ಎಂದು ಗೋಯೆಲ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com