ಉಡುಪಿ: ಟಿಪ್ಪರ್- ಬಸ್ ನಡುವೆ ಮುಖಾಮುಖಿ ಡಿಕ್ಕಿ, ಯುವತಿ ಸಾವು, ಹಲವರಿಗೆ ಗಾಯ

ಬೆಳ್ಮಣ್ ಜಂತ್ರಿ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ

ಉಡುಪಿ: ಜಿಲ್ಲೆಯ ಬೆಳ್ಮಣ್ ಜಂತ್ರಿ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಟಿಪ್ಪರ್ ಹಾಗೂ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಈ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಇನ್ನೋರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅಪಘಾತದ ಬಳಿಕ ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದರಿಂದ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಕಾರ್ಕಳ  ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com