ಏರೋ ಇಂಡಿಯಾ 2019: 50 ಮಹತ್ವದ ಒಪ್ಪಂದಗಳಿಗೆ ಸಹಿ

ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ 2019ರ ಏರ್ ಶೋಗೆ ತೆರೆಬಿದ್ದಿದ್ದು, ರಕ್ಷಣಾ ಇಲಾಖೆ 50 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ.
ವೈಮಾನಿಕ ಪ್ರದರ್ಶನಕ್ಕೆ ತೆರೆ
ವೈಮಾನಿಕ ಪ್ರದರ್ಶನಕ್ಕೆ ತೆರೆ
Updated on
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ 2019ರ ಏರ್ ಶೋಗೆ ತೆರೆಬಿದ್ದಿದ್ದು, ರಕ್ಷಣಾ ಇಲಾಖೆ 50 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ.
ವೈಮಾನಿಕ ಪ್ರದರ್ಶನ ಆರಂಭಕ್ಕೂ ಮುನ್ನವೇ ಸೂರ್ಯಕಿರಣ್ ತಂಡದ ಸಾಹಸ ಪ್ರದರ್ಶನ ತಾಂತ್ರಿಕ ದೋಷದಿಂದ ವಿಫಲವಾಗಿ ದುರಂತ ಸಂಭವಿಸಿತ್ತು. ಓರ್ವ ಪೈಲಟ್ ಸಾವನ್ನಪ್ಪಿ ಮೂವರು  ಪೈಲಟ್ ಗಳು ಗಾಯಗೊಂಡಿದ್ದರು. ಆ ಬಳಿಕ ನಿನ್ನೆ ಅಂದರೆ ಶನಿವಾರ ಯಲಂಹಕ ಪಾರ್ಕಿಂಗ್ ಲಾಟ್ ನಲ್ಲಿ ನಡೆದ ಅಗ್ನಿ ಅವಘಡದಿಂದ 300 ಕಾರುಗಳು ಅಗ್ನಿಗಾಹುತಿಯಾಗಿದ್ದವು. ಇದೀಗ ಈ ಏರ್ ಶೋಗೆ ತೆರೆ ಬಿದ್ದಿದೆ.
ಇನ್ನು ಏರ್ ಶೋ  ಸಂದರ್ಭದಲ್ಲಿ ವಿಶ್ವದ ಮೂಲೆ ಮೂಲೆಯಿಂದ ಹಲವಾರು ವೈಮಾನಿಕ ಸಂಸ್ಥೆಗಳು ಪಾಲ್ಗೊಂಡಿದ್ದವು. ಈ ಪೈಕಿ ಹಲವು ಸಂಸ್ಥೆಗಳು ಭಾರತದೊಂದಿಗೆ ಹಲವು ಮಹತ್ವದ ಒಪ್ಪಂದಗಳನ್ನು ಮಾಡಿಕೊಂಡಿವೆ. ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತ್ ಸಹಾಯ್, 'ಒಟ್ಟಾರೆ ಐದು ದಿನಗಳ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಪ್ರದರ್ಶಕರು, 45 ವಿದೇಶಿ ಕಂಪನಿಗಳು ಭಾಗಿಯಾಗಿದ್ದು, 50ಕ್ಕೂ ಹೆಚ್ಚು ಒಡಂಬಡಿಕೆಗಳಿಗೆ ಸಹಿ ಮಾಡಲಾಗಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಈ ಪ್ರದರ್ಶನವನ್ನು ಕಣ್ಣು ತುಂಬಿಕೊಂಡಿದ್ದಾರೆ ಎಂದರು. 
ಇದೇ ವೇಳೆ ಮಾತನಾಡಿದ ರಾಜ್ಯಪಾಲ ವಜುಭಾಯ್ ವಾಲಾ ಅವರು, 'ಮುಂಬರುವ ವರ್ಷಗಳಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರ ಬಲಗೊಳ್ಳುವುದಕ್ಕೆ ಇದು ಸಹಕಾರಿಯಾಗಿದೆ. ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಭಾರತ ವಿಶ್ವದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿರುವ ದೇಶಗಳಲ್ಲೂ ಭಾರತವೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.  ಏರೋ ಸ್ಪೇಸ್ ಉದ್ಯಮದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಮೇಕ್ ಇನ್ ಇಂಡಿಯಾ ಕಾರ್ಯಕ್ರಮ ಪ್ರೇರಕ ಶಕ್ತಿ ನೀಡಿದೆ' ಎಂದು ಹೇಳಿದರು. 
ಅಗ್ನಿ ಅವಘಡ ನಡೆದ ಸ್ಥಳಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com