

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚುನಿಂದ ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಸುಟ್ಟು ಹೋಗಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದ್ದು, ನೂರಾರು ವನ್ಯಜೀವಿಗಳು ಸಾವಿಗೀಡಾಗಿವೆ.
ಇದರಬೆನ್ನಲ್ಲೇ ಈಗ ಬೆಂಗಳೂರಿನ ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲೂ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.
ನಂದಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪ್ತಿಸಿದ್ದು, ತೀವ್ರ ನಷ್ಟವಾಗಿದೆ. ಭದ್ರತಾ ಸಿಬ್ಬಂದಿಗಳು ಹಾಗೂ ಅರಣ್ಯಾಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಎಂಬುದು ತಿಳಿದುಬಂದಿದೆ.
ಬೆಂಕಿಗೆ ಕಾರಣವಾದರೂ ಏನು ಹಾಗೂ ಎಷ್ಟು ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಏರೋ ಇಂಡಿಯಾ 2019 ಬೆಂಕಿ ಅವಘಡ ಸಂಭವಿಸಿದ ಎರಡು ದಿನಗಳ ನಂತರ ಬೆಂಗಳೂರು ಹತ್ತಿರದಲ್ಲಿ ಮತ್ತೊಂದು ಬೆಂಕಿ ಅವಘಡ ಉಂಟಾಗಿದ್ದು, ನಾಗರಿಕರ ಆತಂಕಕ್ಕೆ ಕಾರಣವಾಗಿದೆ.