ಬೆಂಗಳೂರು: ಮೃತ ಭಿಕ್ಷುಕನ ಬಳಿ 96 ಸಾವಿರ ರು. ಪತ್ತೆ!

ಬೆಂಗಳೂರಿನ ಕಂಟೋನ್ ಮೆಂಟ್ ರೈಲ್ವೆ ನಿಲ್ದಾಣದ ಮುಂಭಾಗದ ಖಾಲಿ ಜಾಗದಲ್ಲಿ ಭಿಕ್ಷುಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಆತನ ಬಳಿ ಕಂತೆ ಕಂತೆ ನೋಟು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರಿನ ಕಂಟೋನ್ ಮೆಂಟ್ ರೈಲ್ವೆ ನಿಲ್ದಾಣದ ಮುಂಭಾಗದ ಖಾಲಿ ಜಾಗದಲ್ಲಿ ಭಿಕ್ಷುಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಆತನ ಬಳಿ ಕಂತೆ ಕಂತೆ ನೋಟು ಪತ್ತೆಯಾಗಿದೆ.
ಮೃತನನ್ನು 75 ವರ್ಷದ ಭಿಕ್ಷುಕ ಶರೀಫ್ ಸಾಬ್ ಎಂದು ಗುರುತಿಸಲಾಗಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು ಕಳೆದ 15 ವರ್ಷದಿಂದ ರೈಲ್ವೆ ನಿಲ್ದಾಣದ ಸುತ್ತಮುತ್ತ ಶರೀಫ್ ಭಿಕ್ಷೆ ಬೇಡುತ್ತಿದ್ದರು.
ಗ್ಯಾಂಗ್ರಿನ್ ನಿಂದ ಬಳಲುತ್ತಿದ್ದ ಶರೀಫ್ ಕೃತಕ ಕಾಲು ಹಾಕಿಸಿಕೊಂಡಿದ್ದರು. ಪರಿಶೀಲನೆ ವೇಳೆ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಬರೋಬ್ಬರಿ 96 ಸಾವಿರ ರುಪಾಯಿ ಪತ್ತೆಯಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com