ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮರುಕಳಿಸಿದ 2017ರ ದುರ್ವರ್ತನೆ; ಎಂಜಿ ರಸ್ತೆಯಲ್ಲಿ ಯುವಕರಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು, ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
Published on
ಬೆಂಗಳೂರು: 2017ರಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ನೆನಪಿಸುವ ಮತ್ತೊಂದು ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು, ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಜಯ ನಗರದಲ್ಲಿ ವಾಸವಿರುವ ಬಿಹಾರ ಮೂಲದ ದಂಪತಿಗಳ ಮೇಲೆ ದುಷ್ಕರ್ಮಿಗಳ ದಾಳಿ ಮಾಡಿದ್ದು, ದಂಪತಿಗಳಿಂದ ಮೊಬೈಲ್ ಮತ್ತು ಪರ್ಸ್ ಕಿತ್ತುಕೊಂಡಿದ್ದಾರೆ. ಅಲ್ಲದೆ ಪತಿಗೆ ಥಳಿಸಿ ಆತನ ಪತ್ನಿಯ ಹಿಂಭಾಗವನ್ನು ಅಸಭ್ಯವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಎಂಜಿ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದ ಹೊಸ ವರ್ಷಾಚರಣೆ ಮುಗಿಸಿಕೊಂಡು ರಾತ್ರಿ ಸುಮಾರು 1 ಗಂಟೆಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ದಂಪತಿಗಳನ್ನು ರಿಚ್ ಮಂಡ್ ವೃತ್ತದಲ್ಲಿ ಬೈಕ್ ಅನ್ನು ಅಡ್ಡಗಟ್ಟಿದ ಮೂವರು ದುಷ್ಕರ್ಮಿ ದಂಪತಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಪತಿಗೆ ಥಳಿಸಿ ಆತನಿಂದ ಪರ್ಸ್ ಮತ್ತು ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ. ಅಲ್ಲದೆ ಮಹಿಳೆಯ ಹಿಂಭಾಗವನ್ನು ಅಸಭ್ಯಮುಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ತೆರಳುತ್ತಿದ್ದ ವೇಳೆ ಪತಿ ಪೊಲೀಸರನ್ನು ಕರೆದು ವಿಚಾರ ತಿಳಿಸಿದ್ದಾರೆ.
ಪೊಲೀಸರ ಆಗಮನವಾಗುತ್ತಿದ್ದಂತೆಯೇ ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಪೈಕಿ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಸ್ತುತ ಘಟನೆ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಬಂಧಿತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಪರಾರಿಯಾಗಿರುವ ಮತ್ತಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com