ಚಳಿಗೆ ರಾಜಧಾನಿ ಗಢಗಢ; ದಶಕದಲ್ಲೇ ಸಿಲಿಕಾನ್ ಸಿಟಿಯಲ್ಲಿ ಕನಿಷ್ಟ ತಾಪಮಾನ

ರಾಜ್ಯದೆಲ್ಲೆಡೆ ಈಗಾಗಲೇ ಚಳಿಯ ಅಬ್ಬರ ಹೆಚ್ಚಾಗಿದ್ದು, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಶೀತಗಾಳಿ ಬೀಸುತ್ತಿರುವುದರಿಂದ ನಗರದಲ್ಲಿ ತಾಪಮಾನ ಇಳಿಕೆಯಾಗಿದ್ದು, ಬುಧವಾರ ಸಿಲಿಕಾನ್...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದೆಲ್ಲೆಡೆ ಈಗಾಗಲೇ ಚಳಿಯ ಅಬ್ಬರ ಹೆಚ್ಚಾಗಿದ್ದು, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಶೀತಗಾಳಿ ಬೀಸುತ್ತಿರುವುದರಿಂದ ನಗರದಲ್ಲಿ ತಾಪಮಾನ ಇಳಿಕೆಯಾಗಿದ್ದು, ಬುಧವಾರ ಸಿಲಿಕಾನ್ ಸಿಟಿಯಲ್ಲಿ ದಶಕದಲ್ಲಿಯೇ ಕನಿಷ್ಟ ತಾಪಮಾನ ದಾಖಲಾಗಿದೆ. 
ಬೆಂಗಳೂರು ನಗದಲ್ಲಿ ನಿನ್ನೆಯ ತಾಪಮಾನ 12 ಡಿಗ್ರಿ ಸೆಲ್ಸಿಯಸ್'ಗೆ ಇಳಿದಿದ್ದು, ಇದು ದಶಕದಲ್ಲಿಯೇ ಕನಿಷ್ಟ ತಾಪಮಾನವೆಂದು ಹೇಳಲಾಗುತ್ತಿದೆ. 
ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಕಡಿಮೆಯಾಗಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 2-3 ದಿನಗಳಿಂದ ವಾಡಿಕೆಗಿಂತ 2ರಿಂದ 3 ಡಿಗ್ರಿ ಕಡಿಮೆ ಉಷ್ಣಾಂಶ ದಾಖಲಾಗಿದೆ. 
ಉತ್ತರ ಕರ್ನಾಟಕ, ರಾಯಚೂರು, ವಿಜಯಪುರ, ಕೊಪ್ಪಳ, ಬೀದರ್ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಕರ್ನಾಟಕ ರಾಜ್ಚ ನೈಸರ್ಗಿಕ ವಿಪತ್ತು ನಿರ್ಹಹಣಾ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com