ಇನ್ನು ಮುಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ

ಈ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಈ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಹಿಂದೆ ಪ್ರಾಂಶುಪಾಲರ ಸಂಘದಿಂದ ನಡೆಸುತ್ತಿದ್ದ ಪರೀಕ್ಷೆಯಲ್ಲಿ ಹೆಚ್ಟಿನ ರೀತಿಯ ಚಟುವಟಿಕೆ ಕಂಡುಬಾರದ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯೇ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ನಿರ್ಧರಿಸಿದೆ.  ಪ್ರಶ್ನೆ ಪತ್ರಿಕೆಗಾಗಿ ಹಿಂದಿನ ವರ್ಷದ ಎರಡು ಸೆಟ್ ಪ್ರಶ್ನೆ ಪತ್ರಿಕೆಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಎಲ್ಲಾ  ವಿಷಯಗಳ ಪರಿಣಿತರನ್ನು ಬಳಸಿಕೊಂಡು ಅತ್ಯುತ್ತಮ ರೀತಿಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಇಲಾಖೆಯಿಂದಲೇ ಸಿದ್ಧಪಡಿಸಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯಲ್ಲಿ  ಯಾವ ರೀತಿಯ ಪರೀಕ್ಷೆ ಬರೆಯಬಹುದು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ತಿಳಿಸಿದ್ದಾರೆ.

ಈ ಮಧ್ಯೆ ಕೆಲ ವಿಷಯಗಳ ಬೋಧನೆ ಇನ್ನೂ ಪೂರ್ಣಗೊಂಡಿರುವುದಿಲ್ಲ , ಅಂತಹ ವೇಳೆ ಹಿಂದಿನ ವರ್ಷದ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳಲ್ಲಿ ಭೀತಿ ಸೃಷ್ಟಿಸಲಾಗುತ್ತಿದೆ ಎಂದು ಪ್ರಾಂಶುಪಾಲರ ಸಂಘ ಟೀಕಿಸಿದೆ.

ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ  ವಿದ್ಯಾರ್ಥಿಗಳಿಗೂ ಪೂರ್ವ ಸಿದ್ಧತಾ ಪರೀಕ್ಷೆ ಇಡಲಾಗುತ್ತಿದೆ. ಈ ವರ್ಷ ಪೂರ್ವ ಸಿದ್ಧತಾ ಪರೀಕ್ಷೆಗಾಗಿ ಪ್ರೌಢಶಾಲಾ ಶಿಕ್ಷಕರ ಸಂಘ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ವಿನಾಯಿತಿ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com