ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ- ಡಾ. ಪರಮೇಶ್

ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಹೇಳಿದ್ದಾರೆ.
ಡಾ. ಶಿವಕುಮಾರ ಸ್ವಾಮೀಜಿ
ಡಾ. ಶಿವಕುಮಾರ ಸ್ವಾಮೀಜಿ
Updated on

ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಹೇಳಿದ್ದಾರೆ.

ಸಿದ್ದಗಂಗಾ ಆಸ್ಪತ್ರೆಯಿಂದ ಶಿವಕುಮಾರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ.

ಶಿವಕುಮಾರ ಸ್ವಾಮೀಜಿಗಳ ಶ್ವಾಸಕೋಶದ ಸೋಂಕು ಸಂಪೂರ್ಣ ಕಡಿಮೆಯಾಗಿಲ್ಲ. ಡಾ. ರೇಲಾ ಹಾಗೂ ಬಿಜಿಎಸ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಅವರ ಸಲಹೆಯಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆಗಳು ಕಾಣಿಸ್ತಿಲ್ಲ, ಪ್ರತಿನಿತ್ಯದಂತೆ ಮಾನಿಟರಿಂಗ್ ಮಾಡುತ್ತಿದ್ದು,  ಶ್ವಾಸಕೋಶದಲ್ಲಿನ  ನೀರನ್ನು ಹೊರ ತೆಗೆಯಲಾಗಿದೆ.  ಇನ್ನೂ ನಾಲ್ಕು ದಿನಗಳ ಕಾಲ ಆಂಟಿ ಬಯೋಡಿಕ್ಸ್ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇತ್ತೀಚಿಗೆ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊನ್ನೆಯಷ್ಟೇ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಗೃಹ ಸಚಿವ ಎಂ. ಬಿ. ಪಾಟೀಲ್ ಸೇರಿದಂತೆ ಹಲವು ಮಂದಿ ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com