ವರ್ಷಾರಂಭದಲ್ಲೇ ಬಂದ್ ಬಿಸಿ, 2 ದಿನ ಬಸ್, ಬ್ಯಾಂಕ್ ಸೇವೆ ಇರಲ್ಲ!

ಹೊಸ ವರ್ಷದ ಆರಂಭದಲ್ಲೇ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದ್ದು, ಇದು ಜ. 8,9 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಜನಸಾಮಾನ್ಯರಿಗೆ ಬಂದ್ ಬಿಸಿ ತಟ್ಟಲಿದ್ದು, ಇದು ಜ. 8,9 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. 
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8, 9ರಂದು ಕಾರ್ಮಿಕ ಸಂಘಟನೆಗಳು ದೇಶ ವ್ಯಾಪಿ ಬಂದ್ ಗೆ ಕರೆ ನೀಡಿದ್ದು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಈ ಹಿನ್ನಲೆಯಲ್ಲಿ ಅಂದು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದಿಲ್ಲ. 
ಅಂದು ಆಟೋ, ಕ್ಯಾಬ್ ಕೂಡಾ ರಸ್ತೆಗೆ ಇಳಿಯುವುದಿಲ್ಲ. ಆಸ್ಪತ್ರೆ, ಔಷಧಿ ಅಂಗಡಿ, ಆ್ಯಂಬುಲೆನ್ಸ್ ಎಂದಿನಂತೆ ಇರಲಿದ್ದು, ದೂರ ಪ್ರಯಾಣ ಮಾಡಲಿಚ್ಚಿಸುವವರು ಪ್ರಯಾಣ ಮುಂದೂಡಿದರೆ ಒಳಿತು.
ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯ
ಇನ್ನು ಅದೇ ಜನವರಿ 8 ಮತ್ತು 9 ರಂದು ಬ್ಯಾಂಕಿಂಗ್ ಸೇವೆಯಲ್ಲೂ ವ್ಯತ್ಯಯವಾಗಲಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಆಲ್ ಇಂಡಿಯಾ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಮತ್ತು ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ ಮುಷ್ಕರ ನಡೆಸುವುದಾಗಿ ಈಗಾಗಲೇ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ)ಗೆ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com