ಕಲಿಕಾ ಮಾಧ್ಯಮದ ಆಯ್ಕೆ: ಆಯಾ ರಾಜ್ಯಗಳಿಗೆ ಅಧಿಕಾರ ಕೊಡಲಿ- ಸಿದ್ದರಾಮಯ್ಯ

ವಿದ್ಯಾರ್ಥಿಗಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕು ಎನ್ನುವುದನ್ನು ತೀರ್ಮಾನಿಸುವ ಅಧಿಕಾರವನ್ನು ಆಯಾ ರಾಜ್ಯಕ್ಕೆ ನೀಡಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕು ಎನ್ನುವುದನ್ನು ತೀರ್ಮಾನಿಸುವ ಅಧಿಕಾರವನ್ನು ಆಯಾ ರಾಜ್ಯಕ್ಕೆ ನೀಡಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಶಿಕ್ಷಣ ಮಾಧ್ಯಮವನ್ನು ಪೋಷಕರೇ ನಿರ್ಧರಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗಾಗೀ ಆಯಾ ರಾಜ್ಯದವರಿಗೆ ಮಕ್ಕಳ ಶಿಕ್ಷಣ ಮಾಧ್ಯಮ ನಿರ್ಧರಿಸುವ ಅಧಿಕಾರ ಕೊಡಬೇಕು. ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ  ಮುಖ್ಯಮಂತ್ರಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಭಾಷಾ ಮಾಧ್ಯಮ ವಿಚಾರ ಕನ್ನಡ ಭಾಷೆಗೆ ಮಾತ್ರ ಸಂಬಂಧಿಸಿದ್ದಲ್ಲ, ಎಲ್ಲ 22 ಭಾಷೆ ಮತ್ತು ರಾಜ್ಯಗಳಿಗೆ ಸಂಬಂಧಪಟ್ಟ ವಿಚಾರವಾಗಿದೆ. ಇದರ ಸಾಧಕ, ಬಾಧಕಗಳ ಬಗ್ಗೆ ಆಳವಾಗಿ ಅಧ್ಯಯನ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com