ಮಂಗಳೂರು: ಮಂಗನ ಜ್ವರದ ಶಂಕೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೆ ಮೂವರಲ್ಲಿ ಜ್ವರದ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಶಿವಮೊಗ್ಗದ ಲೋಕರಾಜ್ ಜೈನ್ ಎಂಬ 28 ವರ್ಷದ ವ್ಯಕ್ತಿಯನ್ನು ಕಳೆದ ಶನಿವಾರ ಚಿಕಿತ್ಸೆಗೆಂದು ಮಂಗಳೂರಿಗೆ ಕರೆತರಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದರು. ಮಂಗಳೂರಿನ ಎಜೆ ಆಸ್ಪತ್ರೆಗೆ ಕೋಮಾ ಸ್ಥಿತಿಯಲ್ಲಿ ಕರೆತಂದಿದ್ದ ಲೋಕರಾಜ್ ಜೈನ್ ಮೆದುಳಿನ ಸೋಂಕಿನಿಂದ ಮೃತಪಟ್ಟರು. ಮಂಗನ ಜ್ವರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೃತಪಟ್ಟವರಲ್ಲಿ ಲೋಕರಾಜ್ ಜೈನ್ 6ನೆಯವರಾಗಿದ್ದಾರೆ. ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರವೀಣ್ ತಿಳಿಸಿದ್ದಾರೆ.
ಮಂಗನ ಕಾಯಿಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಶಿವಮೊಗ್ಗ ಜಿಲ್ಲೆಯಿಂದ ಮೂವರು ಇಲ್ಲಿಗೆ ಬಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ತಿಳಿಸಿದ್ದಾರೆ.
Advertisement