ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯ ಪ್ರಾಂಶುಪಾಲ ಶವವಾಗಿ ಪತ್ತೆ!

ವಾಯುವಿಹಾರಕ್ಕೆ ತೆರಳಿ ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಶವವಾಗಿ ಪತ್ತೆಯಾಗಿದ್ದಾರೆ.
ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯ ಪ್ರಾಂಶುಪಾಲ ಶವವಾಗಿ ಪತ್ತೆ!
ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯ ಪ್ರಾಂಶುಪಾಲ ಶವವಾಗಿ ಪತ್ತೆ!
Updated on: 
ತುಮಕೂರು: ವಾಯುವಿಹಾರಕ್ಕೆ ತೆರಳಿ ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಶವವಾಗಿ ಪತ್ತೆಯಾಗಿದ್ದಾರೆ.
ಈಶ್ವರ್ (57)) ಮೃತದೇಹ ತುಮಕೂರು ಇಸ್ರೋ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ಡಿಸೆಂಬರ್ 9ರಂದು ವಾಯುವಿಹಾರಕ್ಕೆಂದು ಹೊರಟವರು ಮತ್ತೆ ಹಿಂತಿರುಗಿರಲಿಲ್ಲ.
ಈಶ್ವರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕೆ ವ್ಯಕ್ತವಾಗಿದ್ದು ಪ್ರಾಂಶುಪಾಲರ ನಾಪತ್ತೆ ಮತ್ತು ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ವಿಶ್ವವಿದ್ಯಾನಿಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಈಶ್ವರ್ ವಿರುದ್ಧ ಕೆಲ ದಿನಗಳ ಹಿಂದಷ್ಟೇ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.ಅವರ ಸಹೋದ್ಯೋಗಿಗಳೇ ಈ ಆರೋಪ ಹೊರಿಸಿದ್ದರು. ಆದರೆ ಇನ್ನೊಂದೆಡೆ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಸಹೋದ್ಯೋಗಿಗಳ ವಿರುದ್ಧ ಈಶ್ವರ್ ಪೋಷಕರು ಕಿರುಕುಳದ ಆರೋಪ ಮಾಡಿದ್ದಾರೆ.
ಘಟನೆ ಕುರಿತು ತುಮಕೂರು ಹೊಸ ಬಡಾವಣೆ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com