ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ

ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಯಾದಗಿರಿ: ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಗ್ರಾಮದ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ್ದಾರೆ. ಪರಿಣಾಮ ಈ ವರೆಗೂ ಸುಮಾರು 5 ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ಹೊನ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿ, ಇತರೆ ನಾಲ್ಕು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇನ್ನು ವಿಚಾರ ತಿಳಿಯುತ್ತಿದ್ದಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶ ನೀಡಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಅಸ್ವಸ್ಥರಾದ ಗ್ರಾಮಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಮೂವರು ಮಂದಿ ಅಸ್ವಸ್ಥರಾಗಿ ದಾಖಲಾಗಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com