ಬಿಜೆಪಿ ಜೊತೆಗಿನ ಅನುಭವವೂ ಚೆನ್ನಾಗಿರಲಿಲ್ಲ, ಅನುಕೂಲಕ್ಕೆ ತಕ್ಕಂತೆ ಮೋದಿ ಹೇಳಿಕೆ: ದೇವೇಗೌಡ

ಕರ್ನಾಟಕದ ಮುಖ್ಯಮಂತ್ರಿಗಳು ತಾವು ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಅಂತ ಬಹಿರಂಗವಾಗಿ ಹೇಳಿಕೊಳ್ಳುವಂತ ಪರಿಸ್ಥಿತಿಯನ್ನು ಕಾಂಗ್ರೆಸ್ ನಿರ್ಮಾಣ ಮಾಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ...
ದೇವೇಗೌಡ
ದೇವೇಗೌಡ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಗಳು ತಾವು ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಅಂತ ಬಹಿರಂಗವಾಗಿ ಹೇಳಿಕೊಳ್ಳುವಂತ ಪರಿಸ್ಥಿತಿಯನ್ನು ಕಾಂಗ್ರೆಸ್ ನಿರ್ಮಾಣ ಮಾಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಮಾಜಿ ಪ್ರಧಾನಿ ದೆವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. 
ಬಿಜೆಪಿ ಜೊತೆ ಹೋಗಿದ್ದಾಗಲೂ ಕಹಿ ಅನುಭವ ಆಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್-ಕಾಂಗ್ರೆಸ್ ನಡುವಿನ ಮೈತ್ರಿಯನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸಿದ್ದಾರೆ, ಬಿಜೆಪಿ ಜೊತೆ ಹೋಗಿದ್ದಾಗಲೂ ಆಗಿರುವ ಕಹಿ ಅನುಭವಗಳನ್ನು ನಾವು ಹೇಳಬೇಡವೇ ಎಂದು ದೇವೇಗೌಡರು ಹೇಳಿದ್ದಾರೆ. 
ಯಾರ ಬಗ್ಗೆಯೂ ಲಘುವಾಗಿ ಮಾತನಾಡುವುದು ಸರಿಯಲ್ಲ, ಅಂತಹ ಅಭ್ಯಾಸ ನನಗೆ ಇಲ್ಲ, ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಂದ ಬೇರೆ ಯಾವ ಪ್ರತಿಕ್ರಿಯೆ ಬರಲು ಸಾಧ್ಯ?  ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com