ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ.
ಶ್ರೀಗಳ ಶ್ವಾಸಕೋಶದ ಎರಡೂ ಭಾಗದಲ್ಲೂ ನೀರು ತುಂಬಿಕೊಂಡಿದ್ದು ಹೊರತೆಗೆಯಲಾಗಿದೆ. ಸದ್ಯ ದ್ರವ ಆಹಾರ ಮುಂದುವರಿಸಲಾಗಿದೆ ನಿರೀಕ್ಷಿತ ಮಟ್ಟದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ ಹೇಳಿದ್ದಾರೆ.
ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಮಲಗಿದ್ದಲ್ಲಿಯೇ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಕೈಕಾಲುಗಳಲ್ಲಿ ಚಲನವಲನ ಇದೆ. ಆದರೆ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲಕಾಲ ಕೃತಕ ಉಸಿರಾಟದ ಸಾಧನ ತೆರುವುಗೊಳಿಸಿ ಸಹಜ ಉಸಿರಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆ ಕಂಡು ಬಂದರೆ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.