ಸಾಂದರ್ಭಿಕ ಚಿತ್ರ
ರಾಜ್ಯ
ಹುಬ್ಬಳ್ಳಿ; ಇಬ್ಬರು ಉದ್ಯಮಿಗಳ ಮನೆ, ಕಚೇರಿ ಮೇಲೆ ಐಟಿ ಅಧಿಕಾರಿಗಳ ದಾಳಿ
ನಗರದ ಇಬ್ಬರು ಖ್ಯಾತ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ...
ಹುಬ್ಬಳ್ಳಿ: ನಗರದ ಇಬ್ಬರು ಖ್ಯಾತ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಾಳಿ ನಡೆಸಿದ್ದಾರೆ.
ಐ ಟಿ ಅಧಿಕಾರಿಗಳು ಸಂಜಯ್ ಮಿಶ್ರಾ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇವರು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರಗಳಲ್ಲಿ ಬಿಗ್ ಮಿಶ್ರಾ ಎಂಬ ಬ್ರಾಂಡ್ ಹೆಸರಿನಲ್ಲಿ ಸ್ವೀಟ್ ಮಾರ್ಟ್ ನಡೆಸುತ್ತಿದ್ದಾರೆ. ಅಲ್ಲದೆ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಕಲಬುರ್ಗಿ ಮನೆ ಮತ್ತು ಕಚೇರಿ ಮೇಲೆ ಸಹ ದಾಳಿ ನಡೆದಿದೆ.
ಹುಬ್ಬಳ್ಳಿಯ 6 ಕಡೆಗಳಲ್ಲಿ ಸುಮಾರು 40 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಠಾತ್ ದಾಳಿ ನಡೆಸಲು ಪಕ್ಕದ ರಾಜ್ಯದ ಅಧಿಕಾರಿಗಳ ನೆರವನ್ನು ಪಡೆದಿದ್ದಾರೆ.
ಉದ್ಯಮಿಗಳ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ