ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಸಾವು: ಮಾನವೀಯತೆ ಮರೆತು ಫೋಟೋ ತೆಗೆಯುತ್ತಿದ್ದ ಸಹ ಪ್ರಯಾಣಿಕರು

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು 50 ವರ್ಷದ ಮಹಿಳೆ ಮೃತ ಪಟ್ಟಿರುವ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಸಂಜೆ ಈ ದುರಂತ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು 50 ವರ್ಷದ ಮಹಿಳೆ ಮೃತ ಪಟ್ಟಿರುವ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಸಂಜೆ ಈ ದುರಂತ ನಡೆದಿದ್ದು, ಮಹಿಳೆ ಯಾರು ಎಂಬ ಬಗ್ಗೆ ಮಾಹಿತಿ ತಿಳಿದಿಲ್ಲ.
ರೈಲು ನಿಲ್ದಾಣದಲ್ಲಿ ನಿಂತಿದ್ದ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ಫೋಟೋ ತೆಗೆಯುತ್ತಿದ್ದರೇ ಹೊರತು ಆಕೆಗೆ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ,
ತಲೆಗೆ ಪೆಟ್ಟು ಬಿದ್ದು ಮಹಿಳೆ ಕೆಳಗೆ ಬಿದ್ದಿದ್ದರು, ರಕ್ತ ಸೋರುತ್ತಿತ್ತು, ಕೆಲ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ವಿಷಯ ಮುಟ್ಟಿದ್ದರು, ಕೂಡಲೇ ಆಗಮಿಸಿದ ರೈಲ್ವೆ ಪೊಲೀಸರು ಆಗಮಿಸಿ, ಹುಬ್ಬಳ್ಳಿಯಿಂದ ಆಗಮಿಸಿದ ಮಹಿಳೆ ಹೃದಯಾಘಾತದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ, ಪ್ಲಾಟ್ ಫಾರಂ ನಂಬರ್ 6 ರಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com