ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು- ಖರ್ಗೆ ಒತ್ತಾಯ

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡುವಂತೆ  ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಬಡ ಹಾಗೂ ತುಳಿತಕ್ಕೊಳಗಾದ ಜನರ ಶಿಕ್ಷಣ ಮಟ್ಟ ಸುಧಾರಿಸುವಲ್ಲಿ ಶ್ರೀಗಳು ಶ್ರಮಿಸಿದ್ದು, ಪ್ರತಿವರ್ಷ ಸಾವಿರಾರು ಮಕ್ಕಳಿಗೆ ಆಹಾರ, ವಸತಿ ಒದಗಿಸಿದ್ದಾರೆ. ದೇಶದ ಅತ್ಯುನ್ನತ ಪ್ರಶಸ್ತಿ ಪಡೆಯಲು ಅವರು ಅರ್ಹರಾಗಿದ್ದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಅವರು ಹೇಳಿದರು.

ಶಿವಕುಮಾರ ಸ್ವಾಮೀಜಿಗಳ ನಿಧನದಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಎಲ್ಲಾ ಪ್ರಧಾನ ಮಂತ್ರಿಗಳನ್ನು ನೋಡಿದ್ದಾರೆ. ಸಮಾಜದ ತುಳಿತಕ್ಕೊಳಗಾದ  ಮಕ್ಕಳಿಗೂ ಸಂಸ್ಕೃತ ಕಲಿಸಿದ್ದಾರೆ. ಬಡ ಸಮುದಾಯದಿಂದ ಬಂದು ದೊಡ್ಡ ಸೇವೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಶಿಕ್ಷಣ ಹೊರತುಪಡಿಸಿದರೆ ಬೇರೆ ಯಾವುದೇ ವಿಚಾರಗಳಲ್ಲಿಯೂ ಶ್ರೀಗಳು  ಹಸ್ತಕ್ಷೇಪ ಮಾಡುತ್ತಿರಲಿಲ್ಲ. ಅವರ ನಿಧನದವರೆಗೂ ಶಿಕ್ಷಣವೇ ಅವರ ಗುರಿಯಾಗಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com