ಶ್ರೀಗಳ ಆರೋಗ್ಯದಲ್ಲಿ ಏರುಪೇರು; ಮಠಕ್ಕೆ ಪೊಲೀಸ್ ಸರ್ಪಗಾವಲು

ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆ ತಡರಾತ್ರಿಯಲ್ಲಿ ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ಶ್ರೀಗಳಿಗೆ ನಿಶ್ಯಕ್ತಿ ಹೆಚ್ಚಾಗಿದ್ದು ಅವರಿಗೆ ಆಯುರ್ವೇದಿಕ್ ಚಿಕಿತ್ಸೆ ನೀಡಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಇನ್ನು ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಶ್ರೀ ಮಠಕ್ಕೆ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಅಂತೆಯೇ ತಾತ್ಕಾಲಿಕವಾಗಿ ಭಕ್ತರಿಗೆ ಶ್ರೀಗಳ ದರ್ಶನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಶ್ರೀಗಳ ಆರೋಗ್ಯ ಏರಾಪೇರಾದ ದಿನದಿಂದಲೂ ಮಠಕ್ಕೆ ಆಗಮಿಸುತ್ತಿದ್ದ ಭಕ್ತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಬಗ್ಗೆ ವಿಷಯ ತಿಳಿದು ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಮತ್ತು ಮಕ್ಕಳು ಆಗಮಿಸುತ್ತಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಸಿದ್ದಗಂಗಾ ಮಠಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಂತೆಯೇ ಮಠದ ಮುಖ್ಯದ್ವಾರದಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದ್ದು. ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com