ಕ್ರಿಯಾ ಸಮಾಧಿ ಸ್ಥಳ ತಲುಪಿದ ಶ್ರೀಗಳ ಅಂತಿಮಯಾತ್ರೆ, ಸಕಲ ಸರ್ಕಾರಿ ಗೌರವ ಸಲ್ಲಿಕೆ

ನಿನ್ನೆ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಮಠದ ಆವರಣದಲ್ಲಿನ ಕ್ರಿಯಾ ಸಮಾಧಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ
ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ
ತುಮಕೂರು: ನಿನ್ನೆ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಲಿಂಗ ಶರೀರದ ಅಂತಿಮಯಾತ್ರ ಕ್ರಿಯಾ ಸಮಾಧಿ ಸ್ಥಳ ತಲುಪಿದ್ದು, ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ.
ಶ್ರೀಗಳ ಲಿಂಗ ಶರೀರವನ್ನು ರುದ್ರಾಕ್ಷಿ ರಥದಲ್ಲಿ ಮೆರವಣಿಗೆ ಮೂಲಕ ಕ್ರಿಯಾ ಸಮಾಧಿವರೆಗೆ ತರಲಾಯಿತು. ಮೆರವಣಿಗೆಯಲ್ಲಿ 400ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಸಾವಿರಕ್ಕೂ ಹೆಚ್ಚು ಗಣ್ಯರು ಭಾವಹಿಸಿದ್ದರು. 

ಅಂತಿಮ ಕ್ರಿಯಾವಿಧಿಗೆ ಮುನ್ನ ಸಕಲ ಸರ್ಕಾರ ಗೌರವಗಳನ್ನು ಶ್ರೀಗಳಿಗೆ ಸಮರ್ಪಿಸಲಾಯಿತು. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಶ್ರೀಗಳ ಭೌತಿಕ ಶರೀರಕ್ಕೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು. ಬಳಿಕ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ನಮನ ಸಲ್ಲಿಸಿದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಷ್ಪನಮನ ಸಲ್ಲಿಸಿದರು. 
ಸುತ್ತೂರು ಶ್ರೀಗಳು ಹಾಗೂ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಐವರು ಸ್ವಾಮೀಜಿಗಳ ನೇತೃತ್ವದಲ್ಲಿ ಸಂಜೆ 4.30ಕ್ಕೆ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿದುಬಂದಿದ್ದು, ರಾಜ್ಯ ಸರ್ಕಾರದಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಆಗಮೋಕ್ತ ವಿಧಿವಿಧಾನದ ಪ್ರಕಾರ ನಡೆದಾಡುವ ದೇವರನ್ನು ಬೀಳ್ಕೊಡಲಾಗುತ್ತದೆ.
ಇನ್ನು ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾಸಮಾಧಿಗೂ ಮುನ್ನ ಒಂದಷ್ಟು ಧಾರ್ಮಿಕ- ವಿಧಿ ವಿಧಾನಗಳು ನಡೆಯಲಿದ್ದು, ಶ್ರೀಗಳ ಅಂತ್ಯಕ್ರಿಯೆ ಕಾರ್ಯಗಳು ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾಗಿವೆ. ಮೊದಲಿಗೆ ಪಾರ್ಥಿವ ಶರೀರದ ಶುದ್ಧೀಕರಣ ಮಾಡಲಾಗು ತ್ತದೆ. ನಂತರ ಕಲಶ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ಪುಣ್ಯ, ನಂದಿಪೂಜೆ. ಪಂಚಕಳಸ ಪೂಜೆ, ಸಪ್ತರ್ಶಿ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ಸಂಪ್ರದಾಯದಂತೆ ನಡೆಸಲಾಗುತ್ತದೆ. ಆ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com