ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ-ಎಂ ಬಿ ಪಾಟೀಲ್

ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ...
ಎಂ ಬಿ ಪಾಟೀಲ್
ಎಂ ಬಿ ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೆ ಅವಮಾನ ಮಾಡಿದೆ ಎಂದು ಗೃಹ ಸಚಿವ ಎಂ ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಸ್ವಾತಂತ್ರ್ಯ ಪೂರ್ವದಿಂದಲೂ ಸರ್ಕಾರ ಮಾಡಲಾರದ ಕೆಲಸವನ್ನು ತಮ್ಮ ಸೇವಾ ಸಂಸ್ಥೆಗಳ ಮೂಲಕ ಮಾಡಿ ತೋರಿಸಿ ಕೋಟ್ಯಂತರ ಜನರ ಹೃದಯದಲ್ಲಿ ಸಿದ್ದಗಂಗಾ ಶ್ರೀಗಳು ಸ್ಥಾನ ಪಡೆದಿದ್ದಾರೆ. ಲಕ್ಷಾಂತರ ಬಡ ಶಾಲಾ ಮಕ್ಕಳಿಗೆ ಆಶ್ರಯ ನೀಡಿದ ತನ್ಮೂಲಕ ರಾಜ್ಯ ಮತ್ತು ತುಮಕೂರನ್ನು ಬೆಳೆಸಿದ 111 ವರ್ಷಗಳ ಪರಮಪೂಜ್ಯರ ಸೇವೆಯನ್ನು ಅವಮಾನಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಯನ್ನು ಅಪಮೌಲ್ಯಕ್ಕೆ ಈಡು ಮಾಡಿದೆ ಎಂದು ಆರೋಪಿಸಿದ್ದಾರೆ.

ಜಾತ್ಯತೀತವಾಗಿ, ಪಕ್ಷಾತೀತವಾಗಿ ವಿನಂತಿ ಮಾಡಿಕೊಂಡರೂ ಸಹ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಕೇಂದ್ರ ಸರ್ಕಾರ ಡಾ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದೆ ಇರುವ ಮೂಲಕ ಕರ್ನಾಟಕ ಕುರಿತು ತನ್ನ ಅಸಡ್ಡೆ ಮುಂದುವರಿಸಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com