ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಮತ್ತು ಇತರರು
ರಾಜ್ಯ
ಸಿಇಟಿ ದಾಖಲಾತಿ ಶುಲ್ಕದಲ್ಲಿ ಕಡಿತ; ಈ ವರ್ಷದಿಂದಲೇ ಜಾರಿ
ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಾಖಲಾತಿ ...
ಬೆಂಗಳೂರು: ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಾಖಲಾತಿ ಶುಲ್ಕದಲ್ಲಿ ಸರ್ಕಾರಿ ಕೊಂಚ ರಿಯಾಯಿತಿ ನೀಡಿದೆ.
ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕಳೆದ ವರ್ಷಕ್ಕಿಂತ 150 ರೂಪಾಯಿ ಹಾಗೂ ವಿದ್ಯಾರ್ಥಿನಿಯರು ಮತ್ತು ಎಸ್.ಸಿ, ಎಸ್ .ಟಿ ಅಭ್ಯರ್ಥಿಗಳು ಕಳೆದ ವರ್ಷಕ್ಕಿಂತ ಶೇಕಡಾ 50ರಷ್ಟು ಕಡಿಮೆ ಶುಲ್ಕ ಪಾವತಿಸಬೇಕಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷದಿಂದ ದಾಖಲಾತಿ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ನಿನ್ನೆ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ನೇತೃತ್ವದಲ್ಲಿ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ