ವೈದ್ಯರಿಗೆ ಬೆದರಿಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಬೆದರಿಕೆ ಹಾಕಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಕ್ಕಳ ವೈದ್ಯೆಗೆ ಬೆದರಿಕೆಯೊಡ್ಡುತ್ತಿರುವ ದೃಶ್ಯ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಕ್ಕಳ ವೈದ್ಯೆಗೆ ಬೆದರಿಕೆಯೊಡ್ಡುತ್ತಿರುವ ದೃಶ್ಯ
ಮಂಗಳೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಬೆದರಿಕೆ ಹಾಕಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮಗೆ ಬೆದರಿಕೆ ಹಾಕಿ ಕೆಲಸಕ್ಕೆ ಅಡ್ಡಪಡಿಪಡಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ ವೈದ್ಯೆ ಡಾ. ಅರ್ಚನಾ ಪೊಲೀಸರಿಗೆ ದೂರು ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿಚಾರಿಸಿದ್ದರು. ರೋಗಿಗೆ ಚಿಕಿತ್ಸೆ ನೀಡಲಾಗುತ್ತಿರುವ ವಿವರಗಳನ್ನು ವೈದ್ಯರು ಬಹಿರಂಗಪಡಿಸದ ಕಾರಣ ವೈದ್ಯರೊಂದಿಗೆ ಅಸಮಾಧಾನಗೊಂಡು, ಅವರಿಗೆ ಬೆದರಿಕೆ ಹಾಕಿ, ಕೆಲಸಕ್ಕೆ ಅಡ್ಡಿಪಡಿಸಿದ್ದರು ಎಂದು ಹೇಳಲಾಗಿದೆ. 
ಚುನಾಯಿತ ಪ್ರತಿನಿಧಿಯ ವಿರುದ್ಧ ವೈದ್ಯಕೀಯ ಸೇವಾ ಸಿಬ್ಬಂದಿಗಳ ಮೇಲಿನ ಹಿಂಸೆ ಹಾಗೂ ವೈದ್ಯಕೀಯ ಸಂಸ್ಥೆಗಳ ಆಸ್ತಿಪಾಸ್ತಿಗೆ ಹಾನಿ ಮಾಡಿದ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com