ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀರಿನ ಸಂರಕ್ಷಣೆ ಮತ್ತು ಪರಿಸರ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ, ಪ್ರಬಂಧ, ಚರ್ಚಾ ಸ್ಪರ್ಧೆ, ಫ್ಯಾನ್ಸಿ ಡ್ರೆಸ್, ಸ್ಕಿಟ್, ರಸಪ್ರಶ್ನೆ ಏರ್ಪಡಿಸಬೇಕು. ಬೆಳಗ್ಗೆ ಪ್ರಾರ್ಥನೆ ಸಮಯದಲ್ಲಿ ಮತ್ತು ಮಕ್ಕಳು ಎಲ್ಲರೂ ಒಟ್ಟಾಗಿ ಸೇರುವ ಇತರ ಸಂದರ್ಭಗಳಲ್ಲಿ ಶಾಲಾ ಆಡಳಿತ ಮಂಡಳಿ ಮಕ್ಕಳಲ್ಲಿ ನೀರಿನ ಮತ್ತು ಪರಿಸರ ಸಂರಕ್ಷಣೆ ಕುರಿತು ಹೇಳಿಕೊಡಬೇಕು. ಶಾಲಾ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನಗಳನ್ನು ಅಳವಡಿಸಬೇಕು. ನೀರಿನ ಅಗತ್ಯಗಳು ಮತ್ತು ಸಂರಕ್ಷಣೆ ಹಾಗೂ ಗಿಡ ಮರಗಳನ್ನು ಕಾಪಾಡುವ ಬಗ್ಗೆ ಮಕ್ಕಳಿಗೆ ಹೇಳಿಕೊಡಲು ಪರಿಸರ ತಜ್ಞರನ್ನು ಕರೆಸಬೇಕು ಎಂದು ಸುತ್ತೋಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.