ಕಾಗೋಡು ತಿಮ್ಮಪ್ಪ ಆರೋಗ್ಯ ಸ್ಥಿರ, ವಾರ್ಡ್ ಗೆ ಶಿಫ್ಟ್

ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ...
ಆಸ್ಪತ್ರೆಯಲ್ಲಿ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ
ಆಸ್ಪತ್ರೆಯಲ್ಲಿ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ
Updated on
ಶಿವಮೊಗ್ಗ: ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಐಸಿಯುನಿಂದ ವಾರ್ಡ್ ಗೆ ಅವರನ್ನು ವರ್ಗಾಯಿಸಲಾಗಿದೆ. 
ವಯೋಸಹಜ ಕಾಯಿಲೆಯಿಂದ ಆರೋಗ್ಯದಲ್ಲಿ ಏರುಪೇರಾಗಿ ಕಾಗೋಡು ತಿಮ್ಮಪ್ಪ ಅವರು ನಿನ್ನೆ ನಸುಕಿನ ಜಾವ ಶಿವಮೊಗ್ಗದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತಕ್ಷಣ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗಳಿಂದ ಬಂದಿರುವ ಮಾಹಿತಿ ಪ್ರಕಾರ, ಉಸಿರಾಟದ ತೊಂದರೆ ಮತ್ತು ರಕ್ತದೊತ್ತಡ ಸಮಸ್ಯೆಯಿಂದ ಆರೋಗ್ಯದಲ್ಲಿ ವ್ಯತ್ಯಯ ಉಂಟಾಯಿತು. ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿದ್ದಾರೆ. ಇಂದು ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. 
ಹೆಚ್ಚಿನ ಚಿಕಿತ್ಸೆಗೆ ಕಾಗೋಡು ತಿಮ್ಮಪ್ಪ ಅವರನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆತರಲಾಗುವುದು ಎಂಬ ಮಾತುಗಳು ನಿನ್ನೆ ಕೇಳಿಬರುತ್ತಿತ್ತು. ಮಾಜಿ ಶಾಸಕ ಬೇಲೂರು ಗೋಪಾಲಕೃಷ್ಣ, ಹೆಚ್ ಎಸ್ ಸುಂದರೇಶ್ ಮತ್ತು ಇತರರು ಆಸ್ಪತ್ರೆಗೆ ಭೇಟಿ ನೀಡಿ ಕಾಗೋಡು ಅವರ ಆರೋಗ್ಯ ವಿಚಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com