ನಾಳೆಯಿಂದ ಜು. 14ರ ವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ

ಶಕ್ತಿ ಕೇಂದ್ರ ವಿಧಾನಸೌಧ ಬುಧವಾರ ಭಾರೀ ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ವಿಧಾನಸೌಧ
ವಿಧಾನಸೌಧ
Updated on
ಬೆಂಗಳೂರು: ಶಕ್ತಿ ಕೇಂದ್ರ ವಿಧಾನಸೌಧ ಬುಧವಾರ ಭಾರೀ ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜುಲೈ 11 ರಿಂದ ಜುಲೈ 14ರ ವರೆಗೆ, ಬೆಳಗ್ಗೆ 6 ರಿಂದ ರಾತ್ರಿ 12ರ ವರೆಗೆ ವಿಧಾನಸೌಧದಿಂದ 2 ಕಿಲೋ ಮೀಟರ್ ಸುತ್ತ ಕಲಂ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜಕೀಯ ಮುಖಂಡರು, ಬೆಂಬಲಿಗರು, ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆದು, ಕಾರ್ಯಕರ್ತರ ಮಧ್ಯೆ ಸಂಘರ್ಷಗಳು ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಿಷೆಧಾಜ್ಞೆ ಜಾರಿಗೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com