ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ನಿಂದ 1 ಕೋಟಿ ಲಂಚ ಪಡೆದಿದ್ದ ಬಂಧಿತ ಜಿಲ್ಲಾಧಿಕಾರಿ

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬೆಂಗಳೂರು ಜಿಲ್ಲಾಧಿಕಾರಿ ಡಿಸಿ ವಿಜಯ್ ಶಂಕರ್ ಮನ್ಸೂರ್ ಖಾನ್ ನಿಂದ 1 ಕೋಟಿ ಲಂಚ ಪಡೆದಿದ್ದರು ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬೆಂಗಳೂರು ಜಿಲ್ಲಾಧಿಕಾರಿ ಡಿಸಿ ವಿಜಯ್ ಶಂಕರ್ ಮನ್ಸೂರ್ ಖಾನ್ ನಿಂದ 1 ಕೋಟಿ ಲಂಚ ಪಡೆದಿದ್ದರು ಎನ್ನಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಐಎಂಎ ಸಂಸ್ಥೆಯ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‌ ಶಂಕರ್ ಅವರಿಂದ ವಿಶೇಷ ತನಿಖಾ ದಳ(ಎಸ್‌ಎಟಿ) 2.5 ಕೋಟಿ ರೂ. ವಶಪಡಿಸಿಕೊಂಡಿರುವುದಾಗಿ ಶುಕ್ರವಾರ ತಿಳಿಸಿದೆ.
ರಿಚ್ ಮಂಡ್‌ ರಸ್ತೆಯಲ್ಲಿರುವ ಐಎಂಎ ಸಂಸ್ಥೆಯ ಒಡೆತನದ ಅಪಾರ್ಟ್‌ಮೆಂಟ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಎಸ್‌ಐಟಿ ನಕಲಿ ದಾಖಲೆ ಸೃಷ್ಟಿ ಆರೋಪದಡಿ ಮುನೀರ್‌ ಮತ್ತು ಬ್ರಿಗೆಡ್‌ ಬಾಬು ಎಂಬುವರನ್ನು ಬಂಧಿಸಿದೆ. ಈ ಪೈಕಿ ಮುನೀರ್‌ ರೌಡಿ ಶೀಟರ್‌ ಆಗಿದ್ದ ಎಂದು ಎಸ್‌ಐಟಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನುಬಂಧಿತ ಜಿಲ್ಲಾಧಿಕಾರಿ ವಿಜಯ್ ಶಂಕರ್‌ ಲಂಚವಾಗಿ ಪಡೆದಿದ್ದ 1.5 ಕೋಟಿ ರೂ.ವನ್ನು ನಗರದ ಬಿಲ್ಡರ್‌ ಒಬ್ಬರಿಗೆ ನಿವೇಶನ ಮತ್ತು ಫ್ಲಾಟ್‌ ಖರೀದಿಗೆಂದು ನೀಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದ್ದು, ಈ ಮೊತ್ತವನ್ನು ಬಿಲ್ಡರ್‌ನಿಂದ ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಎಸ್‌ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮತ್ತೊಂದು ವ್ಯವಹಾರದಲ್ಲಿ ಇವರು 1 ಕೋಟಿ ರೂ. ಲಂಚ ಪಡೆದಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಆ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com