ತುಮಕೂರಿನ ನಂತರ ಕೋಲಾರದಲ್ಲಿ ಟಿಕ್-ಟಾಕ್ ಕ್ರೇಜ್ ಗೆ ಮತ್ತೊಂದು ಬಲಿ: ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಟಿಕ್ ಟಾಕ್ ಕ್ರೇಜ್‌ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕೋಲಾರ: ಟಿಕ್ ಟಾಕ್ ಕ್ರೇಜ್‌ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.
ಟಿಕ್ ಟಾಕ್ ವಿಡಿಯೋ ಚಿತ್ರೀಕರಿಸುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಕೋಲಾರ ಮಹಿಳಾ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷ ಓದುತ್ತಿದ್ದ ವಿದ್ಯಾರ್ಥಿನಿ ಮಾಲಾ ಮೃತಟ್ಟಿದ್ದಾರೆ.  ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.
ಕಳೆದ ಜೂನ್ 19ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗ್ರಾಮದಲ್ಲಿ ಟಿಕ್​ ಟಾಕ್​ನಲ್ಲಿ ವೀಡಿಯೋ ಸ್ಟಂಟ್‌ ಮಾಡಲು ಹೋಗಿದ್ದ ಕುಮಾರ್‌ ಎಂಬವರು ಕತ್ತು, ಬೆನ್ನು ಮೂಳೆ ಮುರಿದುಕೊಂಡು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com