ಎಸ್ಐಟಿ ತಂಡದಿಂದ ರೋಶನ್ ಬೇಗ್ ವಶ; ಹೈಕೋರ್ಟ್ ಮೊರೆ

ಬಹುಕೋಟಿ ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳದ ...
ರೋಶನ್ ಬೇಗ್
ರೋಶನ್ ಬೇಗ್
Updated on
ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ರೋಶನ್ ಬೇಗ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ಕಕ್ಷಿದಾರರ ಬಂಧನ ಪ್ರಶ್ನಿಸಿ ರೋಶನ್ ಬೇಗ್ ಪರ ವಕೀಲ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ರೋಷನ್ ಬೇಗ್ ರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‍ಐಟಿ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ನಿನ್ನೆ ವಶಕ್ಕೆ ಪಡೆದಿದ್ದು, ವಿಮಾನ ನಿಲ್ದಾಣದಲ್ಲೇ ಹಿರಿಯ ಅಧಿಕಾರಿಗಳಿಂದ ಅವರ ವಿಚಾರಣೆ ನಡೆದಿದೆ ಎನ್ನಲಾಗಿದೆ. ಅಂತೆಯೇ ರೋಷನ್ ಬೇಗ್ ಮುಂಬೈಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಎಸ್‍ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಇದೇ ಕಾರಣಕ್ಕಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com