ಮಂಗಳೂರು: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಯುವ ಪತ್ರಕರ್ತ ನಾಗೇಶ್ ನಿಧನ

ಮಾರಣಾಂತಿಕ ಡೆಂಗ್ಯು ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪತ್ರಕರ್ತ ನಾಗೇಶ್
ಪತ್ರಕರ್ತ ನಾಗೇಶ್
Updated on: 
ಮಂಗಳೂರು: ಮಾರಣಾಂತಿಕ ಡೆಂಗ್ಯು ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ನೀರುಮಾರ್ಗ ಸಮೀಪದ ಪಡು ನಿವಾಸಿ, ಪತ್ರಕರ್ತ ನಾಗೇಶ್ ಡೆಂಗ್ಯು ಜ್ವರಕ್ಕೆ ಬಲಿಯಾದವರು.
ಕಳೆದ ಕೆಲವು ದಿನಗಳಿಂದ ಶಂಕಿತ ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಅವರು ಜ್ವರ ಉಲ್ಬಣಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗೇಶ್ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾಗೇಶ್ ಕನ್ನಡ ಸುದ್ದಿವಾಹಿನಿ ಬಿಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸದಾ ನಗುಮೊಗದಿಂದ ಎಲ್ಲರೊಡನೆ ಸ್ನೇಹ ಗಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com