ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಲಕ್ಷ್ಮಮ್ಮ ಬಡಾವಣೆಯ ನಿವಾಸಿ ಸರವಣ (45) ಹತ್ಯೆಯಾದವರು . ಹಿರಿಯೂರಿನ ಹೊರವಲಯದಲ್ಲಿನ 70 ಕಣಿವೆ ಸೇತುವೆ ಬಳಿ ಇರುವ ತೋಟವೊಂದರಲ್ಲಿ ತಡರಾತ್ರಿ ಸರವಣ ಅವರನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪಿಎಸ್ ಐ ಮಂಜುನಾಥ್ ಭೇಟಿ ಪರಿಶೀಲಿಸಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.