ಬಿಜೆಪಿಗಿಲ್ಲ ಸರ್ಕಾರ ರಚಿಸುವ ಭಾಗ್ಯ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಸಾಧ್ಯತೆ!

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ವಿಫಲವಾಗಿ ಸರ್ಕಾರ ಪತನವಾಗಿದ್ದು, ಬಿಜೆಪಿ ನಾಯಕರು ನೂತನ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದರೆ ಅವರಿಗೆ ಶಾಕ್ ನೀಡುವ ಸಂಗತಿಯೊಂದು ಇದೀಗ ಬಹಿರಂಗವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ವಿಫಲವಾಗಿ ಸರ್ಕಾರ ಪತನವಾಗಿದ್ದು, ಬಿಜೆಪಿ ನಾಯಕರು ನೂತನ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದರೆ ಅವರಿಗೆ ಶಾಕ್ ನೀಡುವ ಸಂಗತಿಯೊಂದು ಇದೀಗ ಬಹಿರಂಗವಾಗಿದೆ.
ಹೌದು.. ದೋಸ್ತಿ ಸರ್ಕಾರ ಪತನವಾದ ಬೆನ್ನಲ್ಲೇ ಸರ್ಕಾರ ರಚನೆ ಮಾಡಲು ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ದೆಹಲಿ ಟು ಬೆಂಗಳೂರು ಮ್ಯಾರಥಾನ್ ನಡೆಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆಯ ಕುರಿತು ಚರ್ಚೆಗಳಾಗುತ್ತಿವೆ. 
ಇದಕ್ಕೆ ಪೂರಕವೆಂಬಂತೆ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಅವರೂ ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಸ್ತುತ 'ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸೂಕ್ತ ವಾತಾವರಣವಿಲ್ಲ, ಬಿಜೆಪಿ ಸರ್ಕಾರ ರಚಿಸಿದರೂ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ರಮೇಶ್ ಕುಮಾರ್ ಅವರು ತಮಗಿರುವ ವ್ಯಾಪ್ತಿಯಲ್ಲಿ ಸ್ಪೀಕರ್ ಆದೇಶ ಮಾಡಿದ್ದಾರೆ. ಉಳಿದಂತೆ ಇತರರನ್ನು ಸ್ಪೀಕರ್ ಅನರ್ಹ ಮಾಡಬಹುದು. ಆದರೆ ಅರ್ನಹಗೊಂಡ ಶಾಸಕರು ಸುಪ್ರೀಂ ಕೋರ್ಟಿನಲ್ಲಿ ಅನರ್ಹತೆ ಅರ್ಜಿ ಸಲ್ಲಿಸಿ ಪ್ರಶ್ನಿಸಬಹುದು. ಶಾಸಕರ ರಾಜೀನಾಮೆ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿರುವ ಕಾರಣ ಅನರ್ಹತೆ ಪ್ರಕರಣವೂ ಸುಪ್ರೀಂ ಕೋರ್ಟನಲ್ಲಿ ಪ್ರಶ್ನಿಸಲು ಅವಕಾಶವಿದೆ ಎಂದು ಹೇಳಿದರು.
ಆದರೆ ವಿಪರ್ಯಾಸವೆಂದರೆ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ಬಿಜೆಪಿ ಬಳಿಯಿಲ್ಲ. ಬಹುಶಃ ಪ್ರಸಕ್ತ ಸನ್ನಿವೇಶ ನೋಡಿದರೆ ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ ಇದೆ ಎನ್ನಲಾಗಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಬಹುದು ಎಂದು ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com