ಬೆಳೆವಿಮೆ ನೋಂದಣಿ ಅವಧಿ ಆ. 14ರ ವರೆಗೆ ವಿಸ್ತರಣೆ: ಮುಖ್ಯಮಂತ್ರಿ ಸೂಚನೆ
ರಾಜ್ಯ
ಬೆಳೆವಿಮೆ ನೋಂದಣಿ ಅವಧಿ ಆ. 14ರ ವರೆಗೆ ವಿಸ್ತರಣೆ: ಮುಖ್ಯಮಂತ್ರಿ ಸೂಚನೆ
ಬೆಳೆವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14, 2019ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ಬೆಳೆವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14, 2019ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
2019ರ ಮುಂಗಾರು ಹಂಗಾಮಿನಲ್ಲಿ ವಿವಿಧ ಕಾರಣಗಳಿಂದಾಗಿ ನೋಂದಣಿ ಕನಿಷ್ಠ ಪ್ರಮಾಣದಲ್ಲಿರುವುದರಿಂದ ಬೆಳೆ ವಿಮಾ ನೋಂದಣಿ ಅವಧಿಯನ್ನು ವಿಸ್ತರಿಸುವಂತೆ ಹಾಗೂ ಇದಕ್ಕೆ ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಕಳುಹಿಸುವಂತೆಯೂ ಮುಖ್ಯಮಂತ್ರಿಗಳು ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

