ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಸಿಎಂ ಯಡಿಯೂರಪ್ಪ ಸಲಹೆಗಾರ?

ಮಾಜಿ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕವಾಗುವ ಸಾಧ್ಯತೆಯಿದೆ...
ಜ್ಯೋತಿ ಪ್ರಕಾಶ್ ಮಿರ್ಜಿ
ಜ್ಯೋತಿ ಪ್ರಕಾಶ್ ಮಿರ್ಜಿ
Updated on
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕವಾಗುವ ಸಾಧ್ಯತೆಯಿದೆ.
ಗೃಹ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮಹತ್ವದ ವಿಷಯಗಳಿಗೆ ಪ್ರಮುಖವಾಗಿ, ಅಧಿಕಾರಿಗಳ ವರ್ಗಾಪಣೆ ಹಾಗೂ ಪೋಸ್ಟಿಂಗ್ ಸಂಬಂಧ ನೇಮಿಸಲಿದ್ದಾರೆ ಎಂದು ತಿಳಿದು ಬಂದಿದೆ, 
ಲಿಂಗಾಯತ ಸಮುದಾಯಕ್ಕೆ ಸೇರಿದ ಮಿರ್ಜಿ ಯಡಿಯೂರಪ್ಪ ಅವರ ಅತ್ಯಾಪ್ತ, ಯಡಿಯೂರಪ್ಪ 2011 ರಲ್ಲಿ ಸಿಎಂ ಆಗಿದ್ದಾಗ ಮಿರ್ಜಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಮುಖ್ಯಮಂತ್ರಿಗಳ ಸಲಹೆಗಾರರಾಗಿ ಮಾಡಿದ್ದ ಕೆಲಸದ ರೀತಿಯಲ್ಲಿಯೇ ಜ್ಯೋತಿ ಪ್ರಕಾಶ್ ಮಿರ್ಜಿ ಕೂಡ ಕೆಲಸ ಮಾಡಲಿದ್ದಾರೆ ಎಂದು ಅದಿಕಾರಿಯೊಬ್ಬರು ತಿಳಿಸಿದ್ದಾರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com