ಗಿರೀಶ್ ಕಾರ್ನಾಡ್ ವಿಧಿವಶ: ಇಂದು ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ, 3 ದಿನ ಶೋಕಾಚರಣೆ!

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. 
ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಮಾಡಿದ್ದು ಇಂದು ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ. ಮತ್ತು ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ತಿಳಿಸಿದೆ. 
81 ವರ್ಷದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್  ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com