ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಕುಮಾರಸ್ವಾಮಿ ನಿಂದನೆ: ಇಬ್ಬರ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿ ಅಪ್ ಲೋಡ್ ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 
ಬೆಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿ ಅಪ್ ಲೋಡ್ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚನ್ನಪಟ್ಟಣ ನಿವಾಸಿಗಳಾದ ಸಿದ್ದರಾಜು ಮತ್ತು ಚಾಮರಾಜ ಬಂಧಿತ ಆರೋಪಿಗಳು, ಒಬ್ಬ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಕ್ಯಾಬ್ ಚಾಲಕನಾಗಿದ್ದಾನೆ,
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಾಗೂ ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣದಿಂದ ಬೇಸತ್ತು ಈ ರೀತಿ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. 
ಆರೋಪಿಗಳು ಹರಿಬಿಟ್ಟ ವಿಡಿಯೋ ವಾಟ್ಸಾಪ್ ಮೂಲಕ ಜೆಡಿಎಸ್ ಸದಸ್ಯರೊಬ್ಬರಿಗೆ ತಲುಪಿತು, ಇದರ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಾಗಿತ್ತು,. ಇಬ್ಬರು ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com