ಕೊನೆಗೂ ತಗ್ಲಾಕೊಂಡ: ಪ್ರೇಯಸಿ ಜೊತೆ ಅಪಾಯಕಾರಿ ವೀಲಿಂಗ್ ಮಾಡಿದ್ದ ಬೈಕ್ ಸವಾರನ ಬಂಧನ!

ಪ್ರೇಯಸಿಯನ್ನು ಕೂರಿಸಿಕೊಂಡು ಅಪಾಯಕಾರಿ ವೀಲಿಂಗ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಪ್ರೇಯಸಿಯನ್ನು ಕೂರಿಸಿಕೊಂಡು ಅಪಾಯಕಾರಿ ವೀಲಿಂಗ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. 
ದೇವನಹಳ್ಳಿ ರಸ್ತೆಯಲ್ಲಿ ಬೈಕ್ ನ ಹಿಂದೆ ಯುವತಿಯನ್ನು ಕೂರಿಸಿಕೊಂಡು ಯುವಕ ವೀಲಿಂಗ್ ಮಾಡಿದ್ದು ಆರೋಪಿಯನ್ನು ಇದೀಗ ಹೆಬ್ಬಾಳ ಟ್ರಾಫಿಕ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೂರ್ ಅಹಮ್ಮದ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸ್ನೇಹಿತೆ ಜೊತೆ ನಂದಿಬೆಟ್ಟಕ್ಕೆ ತೆರಳುವಾಗ, ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿದ್ದ. ವೀಲಿಂಗ್ ಮಾಡುವ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.
ಈ ವಿಡಿಯೋ ಆಧಾರದ ಮೇಲೆ ಹೆಬ್ಬಾಳ್ ಪೊಲೀಸರು ಸ್ವಯಂಪ್ರೇರಣೆ(ಸುಮೋಟೋ) ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com