ವಿಧಾನ ಸೌಧ
ರಾಜ್ಯ
ಸರ್ಕಾರಿ ನೌಕರರಿಗೆ ಶುಭಸುದ್ದಿ! 4ನೇ ಶನಿವಾರ ಸರ್ಕಾರಿ ರಜೆ, ಈ ತಿಂಗಳಿಂದಲೇ ಜಾರಿ
ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದಲೇ ಇದು ಜಾರಿಗೆ ಬರಲಿದ್ದು, ಸರ್ಕಾರಿ ಆದೇಶ ಇದೀಗ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಇದರಿಂದಾಗಿ ಜೂನ್ 22ರ ನಾಲ್ಕನೇ ಶನಿವಾರ ಸರ್ಕಾರಿ ರಜೆಯಾಗಲಿದೆ. ಇನ್ನು ಪ್ರತಿ ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಎಂದು ಘೋಷಿಸಲಾಗಿದೆ.
" ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಪ್ರತಿತಿಂಗಳ ನಾಲ್ಕನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಇರುವ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ" ಎಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ