ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಚಿಕ್ಕಬಳ್ಳಾಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಬಳಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಆಟೋದಲ್ಲಿ 10 ಜನ ಪ್ರಯಾಣಿಸುತ್ತಿದ್ದು ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 
ಮೃತರನ್ನು ಹಸೀನಾ, ಶಾಜಿಯಾ, ಸಾನಿಯಾ ಮತ್ತು ಜೊಯಾ ಎಂದು ಗುರುತಿಸಲಾಗಿದ್ದು ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ಮೂಲದವರಾಗಿದ್ದು ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com