ಬೆಳಗಾವಿ: ಕಬ್ಬು ಬೆಳೆ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ 9ಸಕ್ಕರೆ ಕಾರ್ಖಾನೆ ಮುಟ್ಟಗೋಲು

ಎಫ್ ಆರ್ ಪಿ ಪ್ರಕಾರ ರೈತರಿಗೆ ಕಬ್ಬು ಬೆಳೆ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಳಗಾವಿ: ಎಫ್ ಆರ್ ಪಿ ಪ್ರಕಾರ ರೈತರಿಗೆ ಕಬ್ಬು ಬೆಳೆ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್ .ಬಿ ಬೊಮ್ಮನಹಳ್ಳಿ ಆದೇಶಿಸಿದ್ದಾರೆ.
ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ತಹಶೀಲ್ದಾರ್ ಅವರಿಗೆ  ಜಿಲ್ಲಾಧಿಕಾರಿ ಸೂಚಿಸಿದ್ದಾರೆ,  ಮುಟ್ಟುಗೋಲಿಗೆ ಒಳಗಾಗಿರುವ ಸಕ್ಕರೆ ಕಾರ್ಖಾನೆಗಳ ಪಟ್ಟಿ ಇಲ್ಲಿದೆ.
ಮುನವಳ್ಳಿಯ ರೇಣುಕಾ ಶುಗರ್ಸ್, ಅಥಣಿ ಶುಗರ್ಸ್, ಬೈಲ ಹೊಂಗಲದ ಸೋಮೇಶ್ವರ ಸಕ್ಕರೆ ಕಾರ್ಖಾನೆ, ಕೊಳವಿಯ ಗೋಕಾಕ್ ಶುಗರ್ಸ್, ಕೃಷ್ಣಾ ಶುಗರ್ಸ್, ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಶುಗರ್ಸ್, ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಎಂ.ಕೆ ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ, ಉಗಾರ ಶುಗರ್ಸ್ ಗಳ ಮುಟ್ಟುಗೋಲಿಗೆ ಡಿಸಿ ಆದೇಶ ಹೊರಡಿಸಿದ್ದಾರೆ,.
ಜೂನ್ 30 ರೊಳಗೆ ಕಬ್ಬು ಬೆಳೆಗಾರರ ಬಾಕಿ ಪಾವತಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದ್ದರು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕಬ್ಬು ಬೆಳೆಗಾರರ ಬಾಕಿ ಕುರಿತು ಚರ್ಚೆ ನಡೆಸಿದ್ದ ಸಿಎಂ, ಬೆಳೆಗಾರರಿಗೆ ಬಾಕಿ ಪಾವತಿಸದ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಸಕ್ಕರೆ ಮಾರಿ ಬಂದ ಹಣವನ್ನು ರೈತರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದರು, ಅದರಂತೆ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com