ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಬೈಕ್ ನ ಫೋಟೊ ತೆಗೆದ ಕರ್ತವ್ಯ ನಿರತ ಟ್ರಾಪಿಕ್ ಕಾನ್ ಸ್ಟೇಬಲ್‍ಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ತೊಕ್ಕೊಟ್ಟು
ಮಂಗಳೂರು: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಬೈಕ್ ನ ಫೋಟೊ ತೆಗೆದ ಕರ್ತವ್ಯ ನಿರತ ಟ್ರಾಪಿಕ್ ಕಾನ್ ಸ್ಟೇಬಲ್‍ಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ತೊಕ್ಕೊಟ್ಟು ಫ್ಲೈ ಓವರ್ ಸಮೀಪದಲ್ಲಿ ನಡೆದಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿ ಸಂಗಣ್ಣ ಗೌಡ ಹಲ್ಲೆಗೊಳಗಾದವರು. ಬೈಕ್ ಸವಾರ ಮದನಿ ನಗರದ ನಿವಾಸಿ ಎಂದು ತಿಳಿದುಬಂದಿದ್ದು, ಆತನ ವಿರುದ್ಧ ಸಂಗಣ್ಣ ಗೌಡ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.