ಬೆಂಗಳೂರು: ಬೈಕ್ ಗೆಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ, ನಾಗವೇಣಿ, ಶಶಿಕುಮಾರ್ ಹಾಗೂ 8 ತಿಂಗಳ ಮಗು ಮೃತ ದುರ್ದೈವಿಗಳು. ಇನ್ನೋವಾ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಕೋಟೆ ಗ್ರಾಮದ ಪಾರ್ವತಮ್ಮ ಹಾಗೂ ಸಂಬಂಧಿಕರು ಬೀಗರ ಊಟಕ್ಕಾಗಿ ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಗೆ ಹೋಗಿದ್ದರು. ಊಟ ಮುಗಿಸಿಕೊಂಡು ಮರಳುತ್ತಿರುವಾಗ ರಾಷ್ಟ್ರೀಯ ಹೆದ್ದಾರಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ಈ ಘಟನೆ ನಡೆದಿದೆ.
ಇನ್ನು ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ, ರ್ಯಾಶ್ ಮತ್ತು ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಏರ್ಪೋರ್ಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.